ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಒಕ್ಕಲಿಗರ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
BIGG NEWS: ಕೊಡಗಿನ ರಾಮಕೊಲ್ಲಿಯಲ್ಲಿ ಜಲಸ್ಪೋಟ : 25 ಎಕರೆಯಷ್ಟು ಪ್ರದೇಶದಲ್ಲಿ ಬೆಟ್ಟ ಬಿರುಕು, ಸ್ಥಳೀಯರಲ್ಲಿ ಆತಂಕ
ಜುಲೈ 17 ರಂದು ನಡೆದ ಒಕ್ಕಲಿಗರ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಎಸ್.ಎಂ.ಕೃಷ್ಣ ಅವರ ನಂತರ ಒಕ್ಕಲಿಗ ಸಮುದಾಯದ ವ್ಯಕ್ತಿಯೊಬ್ಬರು ರಾಜ್ಯದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶ ಒದಗಿಬಂದಿದೆ. ಮುಂದಿನ ಚುನಾವಣೆಯಲ್ಲಿ ಒಕ್ಕಲಿಗರ ಸಮುದಾಯವು ಈ ಅವಕಾಶ ತಪ್ಪಿಸಿಕೊಳ್ಳಬಾರದು ಎಂದು ಹೇಳಿದ್ದಾರೆ. ಈ ಮೂಲಕ ತಾವೂ ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿ ಎಂಬ ಸಂದೇಶವನ್ನು ರವಾನಿಸಿದ್ದಾರೆ.
BIGG NEWS : ಮತ್ತೊಮ್ಮೆ ಭಾರತ ರೂಪಾಯಿ ಮೌಲ್ಯ ದಾಖಲೆಯ ಕುಸಿತ : ಪ್ರತಿ `US ಡಾಲರ್’ ವಿರುದ್ಧ 80ರೂ.ಗೆ ಏರಿಕೆ
ಇನ್ನು ಕಾಂಗ್ರೆಸ್ ನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾವೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವ ಸಮಯದಲ್ಲೇ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.
BREAKING NEWS: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪುಂಡರ ಅಟ್ಟಹಾಸ; ಲಾಂಗ್ ತೋರಿಸಿ ದರೋಡೆ ಮಾಡಿರುವ ಖದೀಮರು