ಬೆಂಗಳೂರು : ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಎಂಜಿನಿಯರಿಂಗ್ ಕಾಲೇಜುನ್ನು ಸೂಪರ್ 30 ಯೋಜನೆಯಡಿ ಆಯ್ಕೆ ಮಾಡಿದ್ದು, ಅಗತ್ಯ ಹಣಕಾಸು ಸೇರಿದಂತೆ ಎಲ್ಲ ಸೌಲಭ್ಯ ನೀಡಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
BIGG NEWS : ರಾಜ್ಯದಲ್ಲಿ ಹೋಬಳಿಗೊಂದು ಮಾದರಿ ಸರ್ಕಾರಿ ಶಾಲೆ ಸ್ಥಾಪನೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷ ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ ಅವರು ಸಲ್ಲಿಸಿದ ವರದಿ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯುತ್ತಮ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ರಾಜ್ಯದ ಎಲ್ಲ ಜಿಲ್ಲೆಗಳ ಮಕ್ಕಳಿಗೂ ದೊರಕಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಗೊಂದು ಸೂಪರ್ 30 ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಯೋಜನೆಯಡಿ (ರೀಜಿನಲ್ ಎಕೋ ಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸ್ ಲೆನ್ಸ್)14 ಸರ್ಕಾರಿ ಹಾಗೂ 16 ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.