ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ( BJP Government ) ಸಚಿವ ಸಂಪುಟ ವಿಸ್ತರಣೆ ( Karnataka Cabinet Expansion ) ಆಗಲಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಶೀಘ್ರವೇ ಮಿನಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗುತ್ತಿದೆ. ಒಂದು ವೇಳೆ ಸಚಿವ ಸಂಪುಟ ವಿಸ್ತರಣೆಯಾದ್ರೇ ಯಾರೆಲ್ಲಾ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ..
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ( KS Eshwarappa ) ಬಗ್ಗೆ ನ್ಯಾಯಾಲಯಕ್ಕೆ ಆತ್ಮಹತ್ಯೆ ಪ್ರಚೋಜನೆ ಸಂಬಂಧ ಯಾವುದೇ ಸಾಕ್ಷಾಯಾಧಾರಗಳಿಲ್ಲ ಎಂಬುದಾಗಿ ಉಲ್ಲೇಖಿಸಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹೀಗಾಗಿ ಅವರಿಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ಸಂಪುಟ ಸೇರೋದಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಆದರೆ ಅವರ ಸಂಪುಟ ಪ್ರವೇಶಕ್ಕೆ ಇರುವುದೊಂದೇ ಅಡ್ಡಿ, ಅದೇ ಈ ಹಿಂದೆ ಲೈಂಗಿಕ ಹಗರಣಕ್ಕೆ ಸಿಲುಕಿ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ ಪ್ರಕರಣ ಇತ್ಯರ್ಥವಾಗಬೇಕು. ರಮೇಶ್ ಜಾರಕಿಹೊಳಿ ಪ್ರಕರಣವೂ ಇನ್ನು ಕೆಲ ದಿನಗಳಲ್ಲಿ ಇತ್ಯರ್ಥವಾಗಲಿದೆ ಎನ್ನಲಾಗುತ್ತಿದೆ. ಈ ಬಳಿಕ ಬೊಮ್ಮಾಯಿ ಸಂಪುಟಕ್ಕೆ ಒಟ್ಟಿಗೇ ಕೆ.ಎಸ್ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅವರು ಸೇರ್ಪಡೆ ಆಗಲಿದ್ದಾರೆ ಎಂಬುದಾಗಿ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಈ ಮೂಲಕ ಶೀಘ್ರವೇ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಮಿನಿ ವಿಸ್ತರಣೆಯಾಗಲಿದೆ ಎನ್ನಲಾಗಿದೆ.