ಉಡುಪಿ : ಹಿರಿಯ ಚಿಂತಕ, ಸಾಹಿತಿ, ಹೋರಾಟಗಾರ ಜಿ. ರಾಜಶೇಖರ್ (75) ಅನಾರೋಗ್ಯದಿಂದ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರಾಜಶೇಖರ್ ಅವರು ರಾತ್ರಿ 11 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ರಾಜಶೇಖರ ಅವರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಕಾಗೋಡು ಸತ್ಯಾಗ್ರಹ, ಪರಿಸರ ಮತ್ತು ಸಮಾಜವಾದ, ಕೋಮುವಾದದ ಕರಾಳ ಮುಖಗಳು, ಹರ್ಷಮಂದರ್ ಬರಹಗಳು (ಸಹಲೇಖಕ: ಕೆ. ಫಣಿರಾಜ್), ಬಹುವಚನ ಭಾರತ, ಬರ್ಟೊಲ್ಟ್ ಬ್ರೆಕ್ಟ್ ಪರಿಚಯ, ದಾರು ಪ್ರತಿಮ ನ ಪೂಜಿವೇ (ಅನುವಾದ)ಮುಂತಾದ ಕೃತಿಗಳನ್ನು ಬರೆದಿದ್ದಾರೆ.
ಪಾರ್ಥಿವ ಶರೀರವನ್ನು ಉಡುಪಿಯ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ನಗರದ ಅಮ್ಮಣ್ಣಿ ರಾಮಣ್ಣ ಸಭಾಂಗಣದ ಸಮೀಪದಲ್ಲಿರುವ ಸಂಬಂಧಿಕರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.