ಬೆಂಗಳೂರು : ಇತ್ತೀಚೆಗಷ್ಟೇ ಕೆಲವು ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರ ಇದೀಗ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದೆ.
ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ.ಕೆ ಅವರು ಅಧಿಸೂಚನೆ ಹೊರಡಿಸಿದ್ದು, ಇಂದು ಒಟ್ಟು 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದ್ದಾರೆ.