ಶಿರಸಿ : ರಾಜ್ಯದ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮೊರಾರ್ಜಿ ವಸತಿ ನಿಲಯ ಸೇರಿದಂತೆ ಹಲವು ವಸತಿ ನಿಲಯಗಳನ್ನು ಪಿಯುಸಿವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
BIGG NEWS : ರಾಜ್ಯ ಸರ್ಕಾರದಿಂದ 12 ನಗರ ಪ್ರಾಧಿಕಾರ ಅಧ್ಯಕ್ಷರ ನೇಮಕ ರದ್ದು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊರಾರ್ಜಿ ಶಾಲೆಗಳು ಉತ್ತಮ ವೇದಿಕೆಯಾಗಿವೆ. 6 ನೇ ತರಗತಿಯಿಂದ ಪಿಯುಸಿವರೆಗೂ ಒಂದೇ ಸ್ಥಳದಲ್ಲಿ ವಿದ್ಯಾಭ್ಯಾಸ ದೊರೆಯುವಂತಾಗಬೇಕು ಎಂಬುದು ನಮ್ಮ ಆಶಯವಾಗಿದೆ. ಹೀಗಾಗಿ ಮೊರಾರ್ಜಿ ಶಾಲೆಗಳನ್ನು ಪಿಯುಸಿವರೆಗೆ ವಿಸ್ತರಿಸುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.