ಬೆಂಗಳೂರು: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.
BIGG NEWS : ರಾಜ್ಯ ಸರ್ಕಾರದಿಂದ 12 ನಗರ ಪ್ರಾಧಿಕಾರ ಅಧ್ಯಕ್ಷರ ನೇಮಕ ರದ್ದು
ರಾಷ್ಟ್ರದ ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಕಾರ್ಯಕ್ರಮ, ವಿವಿಧ ಇಲಾಖೆಗಳು ಮತ್ತು ಕಸ್ತೂರಿ ರಂಗನ್ ಯೋಜನೆ ವಿಚಾರವಾಗಿ ನಿಯೋಗವನ್ನು ಬೆಂಗಳೂರಿನಿಂದ ದೆಹಲಿಗೆ ಕರೆದೊಯ್ಯಿರುವುದಾಗಿ ಸಿಎಂ ಬೊಮ್ಮಾಯಿ ಅವರು ತಿಳಿಸಿದರು.
ಜುಲೈ 25 ಮತ್ತು 26 ರಂದು ದೆಹಲಿಯಲ್ಲಿರುತ್ತೇನೆ. ಆ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಮೇಲಿನವರು ಪ್ರಸ್ತಾಪ ಮಾಡಿದರೆ, ನಾನು ಮಾತುಕತೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.