ಬೆಂಗಳೂರು : ಮುಖ್ಯಮಂತ್ರಿ ಅಭ್ಯರ್ಥಿಗಾಗಿ ಕಾಂಗ್ರೆಸ್ನಲ್ಲಿ ಫೈಟ್ ವಿಚಾರದ ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಲ್ಲಿ ಸದ್ಯ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದ ರೀತಿಯಲ್ಲಿ ಪರಿಸ್ಥಿತಿ ಇದೆ ಎಂದು ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಕೆಲವರು ಸಿಎಂ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ನವರ ಕನಸು ನನಸು ಆಗುವುದಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ರಾಜ್ಯದಲ್ಲಿ ಮತ್ತೆ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನಾವು ಬಿಡುವುದಿಲ್ಲ. ಯಾವ ಕಾರಣಕ್ಕೂ ಅವರು ಮುಖ್ಯಮಂತ್ರಿ ಆಗಲು ನಾವು ಬಿಡುವುದಿಲ್ಲ. ಬಿಜೆಪಿಯವರೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.