ತೆಲಂಗಾಣ : ಮಗನೊಂದಿಗೆ ಪ್ರೇಮ ವಿವಾಹ ಮಾಡಿಕೊಂಡಿದ್ದಕ್ಕೆ ಮನನೊಂದ ಮಹಿಳೆಯೋರ್ವರು ತನ್ನ ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ಭ್ರೂಣ ಸಾವನ್ನಪ್ಪಿದ್ದು,ಸಂತ್ರಸ್ತೆಗೆ ಶೇ.50ರಷ್ಟು ಗಾಯಗಳಾಗಿದ್ದು, ನಿಜಾಮಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳಾದ ಅತ್ತೆ ಮತ್ತು ಆಕೆಯ ಮಗನನ್ನು (ಸಂತ್ರಸ್ತೆಯ ಪತಿ) ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಜುಲೈ 17ರಂದು ಕುರಟಿ ಎಂಬಾತ ಸಂತ್ರಸ್ತೆಯೊಂದಿಗೆ ಜಗಳವಾಡಿದ್ದು, ಜಗಳ ತಾರಕಕ್ಕೇರಿ ಅತ್ತೆ ಸೊಸೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.