ಬೆಂಗಳೂರು: ಕೇರಳದಲ್ಲಿ ಮಂಕಿಪಾಕ್ಸ್ ಕಾಯಿಲೆ ( monkeypox virus ) ಕಾಣಿಸಿಕೊಂಡ ಕಾರಣ, ರಾಜ್ಯದಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ, ಕಾಯಿಲೆಯ ನಿಯಂತ್ರಣಕ್ಕೆ ಕೈಗೊಳ್ಳಬೇಕಾಗಿರುವಂತ ಅಗತ್ಯ ಕ್ರಮಗಳ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದೆ.
BREAKING NEWS: ಬೆಚ್ಚಿಬಿದ್ದ ರಾಯಚೂರು ಜನತೆ: ಹಾಡಹಗಲೇ ಗುತ್ತಿಗೆದಾರರನ್ನು ಕೊಚ್ಚಿ ಕೊಲೆ
ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕೇರಳದ ಕಣ್ಣೂರು ಜಿಲ್ಲೆಯಿಂದ ಮಂಕಿಪಾಕ್ಸ್ ಪ್ರಕರಣದೊಂದೆಗ ಸಂಪರ್ಕದ ಹಿನ್ನಲೆ ಇರುವ ಎರಡನೇ ಪ್ರಕರಣವು ಖಚಿತ ಪಟ್ಟ ಹಿನ್ನಲೆಯಲ್ಲಿ ರಾಜ್ಯವು ಕಣ್ಗಾವಲು ಚಟುವಟಿಕೆಗಳ ಬಗ್ಗೆ ನಿಗಾವಹಿಸಲು ಚುರುಕುಗೊಳಿಸುವ ಅಗತ್ಯವಿರುತ್ತದೆ ಎಂದು ಹೇಳಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳು ಪರಿಣಾಮಕಾರಿಯಾದ ಪೂರ್ವಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಲು ಹಾಗೂ ಭಾರತ ಸರ್ಕಾರದ ಮಾರ್ಗಸೂಚಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಪ್ರಕಾರಣ, ಈ ಕೆಳಗಿನ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.