ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ವಾರದ ರಜೆ ( Weekly Off ) ಮಂಜೂರು ಮಾಡಿ, ಆರೋಗ್ಯ ಇಲಾಖೆ ಆದೇಶಿಸಿದೆ. ಈ ಮೂಲಕ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ.
BIGG NEWS : ನೀತಿ ಆಯೋಗದ ನಾವೀನ್ಯತಾ ಸೂಚ್ಯಂಕ ಬಿಡುಗಡೆ : 3 ನೇ ವರ್ಷವೂ ಕರ್ನಾಟಕ ನಂ.1
ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಾದಂತ ಅರುಂಧತಿ ಅವರು ಸುತ್ತೋಲೆ ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ವಾರ್ಷಿಕ 10 ದಿನಗಳ ಸಾಂದರ್ಭಿಕ ರಜೆ ಮತ್ತು 10 ದಿನಗಳ ವೈದ್ಯಕೀಯ ರಜೆ ಪಡೆಯಲು ಹಾಗೂ ಗುತ್ತಿಗೆ ಸಿಬ್ಬಂದಿಗಳಿಗೆ 180 ದಿನಗಳ ಮಾತೃತ್ವ ರಜೆ, 15 ದಿನಗಳ ಪಿತೃತ್ವ ರಜೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ದಿನಾಂಕ 24-02-2022 ಮತ್ತು 07-07-2022ರಂದು ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದಂತೆ, ಖಾಯಂ ನೌಕರರಂತೆಯೇ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ವಾರಕ್ಕೊಮ್ಮೆ ಒಂದು ದಿನ ( Weekly Off ) ರಜೆ ಪಡೆಯಬೇಕಾಗಿರುತ್ತದೆ. ಆದ್ದರಿಂದ ಎಲ್ಲಾ ಎನ್ ಹೆಚ್ ಎಂ ನೌಕರರು ವಾರಕ್ಕೊಮ್ಮೆ ಕಡ್ಡಾಯವಾಗಿ ಒಂದು ದಿನ ವಾರದ ರಜೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
ವರದಿ : ಲೀಲಾವತಿ ವಸಂತ ಬಿ ಈಶ್ವರಗೆರೆ