ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯರಿಂದ ಕಾಂಗ್ರೆಸ್ ಪಕ್ಷವು ಜಾತಿಯ ಕೆಸರಿಗೆ ಬಿದ್ದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿ ಕಾಂಗ್ರೆಸ್ಗೆ ಜಾತಿ ಪಟ್ಟ ಅಂಟಿಸಿದ್ದಾರೆ. ಶಿವಕುಮಾರ್ ಒಳ್ಳೆಯ ನಾಯಕ ಎಂದುಕೊಂಡಿದ್ದೆ. ನಾನು ಮುಖ್ಯಮಂತ್ರಿಯಾಗಲು ಒಕ್ಕಲಿಗ ಸಮುದಾಯ ಬೆನ್ನಿಗೆ ನಿಲ್ಲಬೇಕು ಎಂದು ಹೇಳುವ ಮೂಲಕ ಜಾತಿವಾದಿ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಮುಕ್ತನಾಗಿದ್ದೇನೆ. ನನ್ನನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು, ಬಿಡುವುದು ಪಕ್ಷದ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
Big news : ಉತ್ತರಪ್ರದೇಶದ ಬಂದಾ ಜಿಲ್ಲೆಯಲ್ಲಿ ಭಾರೀ ಮಳೆ : ಸಿಡಿಲು ಬಡಿದು 6 ಮಂದಿ ಸಾವು, ಏಳು ಜನರಿಗೆ ಗಾಯ