ಬೆಂಗಳೂರು: ಇಂದು ಶಿಕಾರಿಪುರ ಕ್ಷೇತ್ರವನ್ನು ತಾನು ಖಾಲಿ ಮಾಡುತ್ತಿದ್ದೇನೆ. ಈ ಕ್ಷೇತ್ರದಿಂದ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಅವರಿಗೆ ತಮಗೆ ಬೆಂಬಲಿಸಿದಂತೆಯೇ ಬೆಂಬಲಿಸುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( Farmer CM BS Yediyurappa ) ಕೋರಿಕೊಂಡಿದ್ದರು. ಈ ಮೂಲಕ ರಾಜಾಹುಲಿ ಚುನಾವಣಾ ರಾಜಕೀಯ ಘೋಷಿಸಿದ್ದರು. ಈ ಬೆನ್ನಲ್ಲೇ, ಇದೀಗ ಅವರಿಗೆ ಸಂಬಂಧಿಸಿದ್ದಂತ ಡಿನೋಟಫಿಕೇಷನ್ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ( Supreme Court ) ತಡೆಯಾಜ್ಞೆ ವಿಧಿಸಿದೆ. ಈ ಮೂಲಕ ಬಿಗ್ ರಿಲೀಫ್ ನೀಡಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 2006-07ರಲ್ಲಿ ನಡೆದಿದ್ದಂತ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಹೈಕೋರ್ಟ್ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಆದೇಶ ಸಂಬಂಧ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ನ್ಯಾಯಪೀಠವನ್ನು ಕೋರಿಕೊಂಡಿದ್ದರು.
‘ಭಗವತಿ ಏತ ನೀರಾವರಿ ಯೋಜನೆ’ಗೆ ‘ಸಚಿವ ಸಂಪುಟ’ ಅಸ್ತು – ಸಚಿವ ಗೋವಿಂದ ಕಾರಜೋಳ
ಇಂದು ಈ ಸಂಬಂಧದ ಅರ್ಜಿಯನ್ನು ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 2006-07ರ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಹೈಕೋರ್ಟ್ ತನಿಖೆಗೆ ಆದೇಶಿಸಿದ್ದಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ನೀಡಿದೆ.
Viral Video: ನೀರೆಂದುಕೊಂಡು ಬಿಯರ್ ಕುಡಿದ ಕೋಳಿಗಳು… ಮುಂದೇನಾಯ್ತು ಅಂತಾ ಇಲ್ಲಿ ನೋಡಿ!