ತುಮಕೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿರುವ ಕುರಿತು ಮಾಜಿ ಸಿಎಂ ವೀರಪ್ಪ ಮೊಯ್ಲಿ ಸಮರ್ಥಿಸಿಕೊಂಡಿದ್ದಾರೆ.
ನಾಲ್ಕು ತಲೆಮಾರಿಗೆ ಬೇಕಾಗುವಷ್ಟು ಸಂಪಾದನೆ ಮಾಡಿದ್ದಾರೆ ಎಂದು ಅವರು ಹೇಳಿದ್ದು, ಕಾಂಗ್ರೆಸ್ಸಿಗರಿಗೆ ಅಲ್ಲ ಎಂದು ಹೇಳಿದ್ದಾರೆ.
BIGG NEWS: ಸಂಚಾರಿ ನಿಯಮ ಉಲ್ಲಂಘಿಸಿದ ಪೋಷಕರ ವಿಡಿಯೋ ವೈರಲ್; ʼಕ್ರಮ ಕೈಗೊಳ್ಳುತ್ತೇವೆʼ ಎಂದ ಪೊಲೀಸರು
ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಅವರು ಹೇಳಿಕೆ ಕುರಿತು ಸ್ಪಷ್ಟಿಕರಣ ಕೊಟ್ಟಿದ್ದಾರೆ. ಅವರು ಹೇಳಿರೋ ಹೇಳಿಕೆ ನೀಡಿರುವುದು ಕಾಂಗ್ರೆಸ್ಸಿಗರಿಗೆ ಅಲ್ಲ. ಬದಲಾಗಿ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಯ ಫಲವನ್ನ ಅನುಭವಿಸಿದ್ದ ದೇಶದ ಜನರಿಗೆ ಹೇಳಿದ್ದು ಎಂದು ಸಮರ್ಥಿಸಿಕೊಂಡಿದ್ದಾರೆ.
ಇನ್ನು ಸಿಎಂ ಆಕಾಂಕ್ಷಿಗಳ ಬಗ್ಗೆ ಈಗ ಚರ್ಚೆ ಏನು ಇಲ್ಲ. . 2023ಕ್ಕೆ ಕಾಂಗ್ರೆಸ್ ಖಂಡಿತಾ ಅಧಿಕಾರಕ್ಕೆ ಬರುತ್ತೆ. ಹೈಕಮಾಂಡ್ ಹಾಗೂ ಶಾಸಕರು ಯಾರನ್ನ ಸೂಚಿಸುತ್ತಾರೆ ಅವರು ಸಿಎಂ ಆಗ್ತಾರೆ ಎಂದು ಹೇಳಿದ್ದಾರೆ.