ಹಾವೇರಿ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಒಕ್ಕಲಿಗ ಸಮುದಾಯದ ಆರ್ಥಿಕ ಅಭಿವೃದ್ದಿಗಾಗಿ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
BREAKING NEWS: ಜು.25ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ‘ಸೋನಿಯಾ ಗಾಂಧಿ’ಗೆ ಇಡಿ ಸಮನ್ಸ್ | Sonia Gandhi
ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ(Gouda)/ಗೌಡ(Gouda) ಹಳ್ಳಿಕಾರ್, ಕುಂಚಿಟಿಗ, ಗೌಡ, ಪಾಕು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, ನಾಮಧಾರಿಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಒಕ್ಕಲಿಗ ಸಮುದಾಯದವರು ಸ್ವಯಂ ಉದ್ಯೋಗ ಸಾಲ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ, ಸರಕು ವಾಹನ ಖರೀದಿಗೆ ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.
ಎಚ್ಚರ..! ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ಭಿಕ್ಷಾಟನೆ, ದುಡಿಮೆಗೆ ತೊಡಗಿಸುವುದು ಅಪರಾಧ
ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಸಮುದಾಯದ ಯುವ ಜನತೆಯನ್ನು ಅಭಿವೃದ್ದಿ ಪಡಿಸಿ ಸ್ವ-ಉದ್ಯೋಗಮುಖಿಗಳಾಗಿಸಲು ಐಟಿಎಸ್, ಜಿಟಿಟಿಸಿ, ಕೆಜಿಟಿಟಿಐಯಲ್ಲಿ ಅಲ್ಪಾವಧಿ ಕೋರ್ಸಗಳ ಮೂಲಕ ಕೌಶಲ್ಯ ತರಬೇತಿ ನೀಡಲು http://kaushalkar.com ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
Job Alert: KPSCಯಿಂದ ‘ಮೋಟಾರು ವಾಹನ ನಿರೀಕ್ಷಕ’ರ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಅಗತ್ಯ ದಾಖಲೆಯೊಂದಿಗೆ ಅರ್ಜಿಯನ್ನು ದಿನಾಂಕ 18-08-2022ರೊಳಗಾಗಿ ಸಲ್ಲಿಸಬೇಕು. ನಿಗಮದ ಎಲ್ಲ ಯೋಜನೆಗಳ ಮಾಹಿತಿಗಾಗಿ ವೆಬ್ಸೈಟ್ http://kvcdc.karnataka.gov.in ಅಥವಾ ದೂ.080-29904268 ಹಾಗೂ ಜಿಲ್ಲಾ ಕಚೇರಿ ದೂ.08375-20038 ಸಂಪರ್ಕಿಸಲು ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.