ನವದೆಹಲಿ : ಮುಂದಿನ ಚುನಾವಣೆಯಲ್ಲಿ ( Karnataka Assembly Election 2022 ) ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ( Farmer CM BS Yediyurappa ) ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪ ದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.
ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ