ಚಾಮರಾಜನಗರ: ಕಾವೇರಿ ಹಾಗೂ ಕಬಿನಿ ನದಿಯಲ್ಲಿ ಪ್ರವಾಹ ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಜಲಪಾತಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ. ಈ ಮೂಲಕ ಪ್ರವಾಸಿಗರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಮಾಜಿ ಸಿಎಂ ಯಡಿಯೂರಪ್ಪಗೆ ಸುಸ್ತಾಗಲಿ, ನಿವೃತ್ತಿಯಾಗಲಿ ಇಲ್ಲ – ಸಿಎಂ ಬೊಮ್ಮಾಯಿ
ಈ ಕುರಿತಂತೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಕೇರಳ ರಾಜ್ಯದ ವೈನಾಡು ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ಪ್ರಮಾಣವು ಗಣನೀಯವಾಗಿ ಇಳಿಮುಖವಾಗಿರುವುದರಿಂದ ಕಾವೇರಿ ಹಾಗೂ ಕಬಿನಿ ನದಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿರುತ್ತದೆ. ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ ಹಾಗೂ ಹನೂರು ತಾಲೂಕಿನ ಹೊಗೆನಕಲ್ ಜಲಪಾತಗಳಿಗೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಹೊರಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಈ ಹಿನ್ನಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ ಹಾಗೂ ಹನೂರು ತಾಲೂಕಿನ ಹೊಗೆನಕಲ್ ಜಲಪಾತಗಳಿಗೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಹೊರಡಿಸಲಾಗಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
BIG NEWS: ‘ಕಸ್ತೂರಿ ರಂಗನ್ ವರದಿ’ ತಿರಸ್ಕಾರ: ಕೇಂದ್ರಕ್ಕೆ ತಿಳಿಸಲು ‘ಸಂಪುಟ ಸಭೆ’ಯಲ್ಲಿ ನಿರ್ಧಾರ