ಚಿತ್ರದುರ್ಗ : ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯಲಯದಲ್ಲಿ ರಾತ್ರಿ ಊಟ ಸೇವಿಸಿದ 13 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕರೆ ಪಟ್ಟಣದಲ್ಲಿ ನಡೆದಿದೆ.
ಹೊಳಲ್ಕರೆ ಪಟ್ಟಣದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದಲ್ಲಿ ರಾತ್ರಿ ಊಟ ಸೇವಿಸಿದ 53 ವಿದ್ಯಾರ್ಥಿಗಳ ಪೈಕಿ 13 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ. ಸದ್ಯ 11 ವಿದ್ಯಾರ್ಥಿಗಳನ್ನು ಹೊಳಲ್ಕರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ವಿದ್ಯಾರ್ಥಿಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.