ನವದೆಹಲಿ : ದೆಹಲಿ ರೈಲ್ವೆ ನಿಲ್ದಾಣದಲ್ಲಿ 30 ವರ್ಷದ ಮಹಿಳೆ ಮೇಲೆ ಅಲ್ಲಿನ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ರೈಲ್ವೆ ನಿಲ್ದಾಣದೊಳಗಿನ ಎಲೆಕ್ಟ್ರಿಕಲ್ ನಿರ್ವಹಣಾ ಸಿಬ್ಬಂದಿ ಕೊಠಡಿಯಲ್ಲಿ ಇಬ್ಬರು ರೈಲ್ವೆ ಉದ್ಯೋಗಿಗಳು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೊಠಡಿಯನ್ನು ಹೊರಗಿನಿಂದ ಕಾವಲು ಕಾಯುವ ಮೂಲಕ ಹಲ್ಲೆಗೆ ಸಹಕರಿಸಿದ ಇಬ್ಬರು ಸೇರಿದಂತೆ ನಾಲ್ವರು ರೈಲ್ವೆ ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.