ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಗ್ಯೂ ಅಟ್ಟಹಾಸ ಹೆಚ್ಚಾಗುತ್ತಿದ್ದು, ಡೆಂಗ್ಯೂ ಮಹಾಮಾರಿಗೆ 5 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪು ಜಿಲ್ಲೆಯಲ್ಲಿ 73 ಮಂದಿಗೆ ಡೆಂಗ್ಯೂ ಜ್ವರ ಪತ್ತೆಯಾಗಿದ್ದು, ಚಿಂತಾಮಣಿ ನಗರದ 20 ನೇ ವಾರ್ಡ್ ನಲ್ಲಿ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಕೊರೊನಾ ಸೋಂಕಿನ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಗ್ಯೂ ಆತಂಕ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.
Rain in Karnataka : ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರೀ ಮಳೆ : `ಯೆಲ್ಲೋ ಅಲರ್ಟ್’ ಘೋಷಣೆ