ಸುಮಾರು ನಾಲ್ಕು ವರ್ಷಗಳಿಂದ ಬಂಟ್ವಾಳದ ಯುವತಿ ಫೇಸ್ಬುಕ್ ಖಾತೆ ನಂಬಿ ಪ್ರೇಮದ ಬಲೆಗೆ ಬಿದ್ದಿದ್ದಳು. ಫೇಸ್ಬುಕ್ ಮೆಸೆಂಜರ್ನಲ್ಲಿ ಚಾಟಿಂಗ್, ದೂರವಾಣಿ ಕರೆಯಲ್ಲೂ ಇಬ್ಬರೂ ಮಾತನಾಡುತ್ತಿದ್ದರು. ಮಗಳ ಪ್ರೇಮ ಪ್ರಕರಣ ತಾಯಿಗೆ ಗೊತ್ತಾಗಿದ್ದು, ಬಳಿಕ ಈ ವಿಚಾರವನ್ನು ಬಂಟ್ವಾಳದ ನ್ಯಾಯವಾದಿ ಶೈಲಜಾ ರಾಜೇಶ್ ಬಳಿ ಹೇಳಿಕೊಂಡಿದ್ದರು.
ನ್ಯಾ. ಶೈಲಜಾ ಅವರು ವಿಟ್ಲ ಪೊಲೀಸರ ಸಹಾಯದಿಂದ ಪ್ರಕರಣದ ಜಾಡು ಹಿಡಿದು ಹೊರಟಾಗ ಫೇಸ್ಬುಕ್ ಗೆಳೆಯನ ಅಸಲಿ ಮುಖ ಬಯಲಾಗಿದೆ. ಮೊಬೈಲ್ ಲೊಕೇಶನ್ ಹುಡುಕಾಡಿಕೊಂಡು ಉಡುಪಿ ಜಿಲ್ಲೆಯ ಶಂಕರನಾರಾಯಣ ಎಂಬಲ್ಲಿಗೆ ಹೋದಾಗ, ಅಲ್ಲಿದ್ದದ್ದು ಮಂಗಳಮುಖಿ ಎಂಬುದು ಗೊತ್ತಾಗಿದೆ. ಇದೀಗ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಂಗಳಮುಖಿಯನ್ನು ಬಂಧಿಸಲಾಗಿದೆ.