ಬೆಳಗಾವಿ: ಸಿದ್ದರಾಮಯ್ಯ ( Siddaramaiah ) ಅವರು ಮತ್ತೊಮ್ಮೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ( MLA Zameer Ahmad Khan ) ಹೇಳುವ ಮೂಲಕ, ಬಾಯಿಮುಚ್ಚಿಕೊಂಡು ಕೆಲಸ ಮಾಡ್ಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumr ) ಹೇಳಿಕೆಗೆ ಟಕ್ಕರ್ ಕೊಟ್ಟಿದ್ದಾರೆ.
SHOCKING NEWS: ಅಮೆರಿಕದಲ್ಲಿ ಮೊದಲ ಬಾರಿಗೆ ಇಬ್ಬರು ಮಕ್ಕಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆ | Monkeypox
ಇಂದು ಬೆಳಗಾವಿ ಜಿಲ್ಲೆಯಲ್ಲಿ ಆಗಸ್ಟ್ 3ರಂದು ನಡೆಯಲಿರುವಂತ ವಿಪಕ್ಷ ನಾಯಕ ಸಿದ್ಧರಾಮಯ್ಯ 75ನೇ ಜನ್ಮದಿನದ ಅಮೃತಮಹೋತ್ಸವ ಸಂಬಂಧದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಗಳಾಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿದೆ. ಆದರೆ, ನಮಗೆ ಎಲ್ಲಕ್ಕಿಂತ ಮೊದಲು ಪಕ್ಷ ಮುಖ್ಯ. ನಾವೆಲ್ಲರೂ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಾಗಿ ನಾಡಿನ ಜನರ ಸೇವೆ ಮಾಡುತ್ತಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು 75ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಅವರ ಹುಟ್ಟುಹಬ್ಬ ಆಚರಿಸುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ. ಅಪಾರ ಅನುಭವ ಮತ್ತು ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಮನೋಭಾವ, ನಿಸ್ವಾರ್ಥ ಜನಸೇವೆಯ ಗುರಿ ಹೊಂದಿರುವ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಿಗೆ ಕೊಟ್ಟಿರುವ ಅನುದಾನಗಳು ಮತ್ತು ಸೌಕರ್ಯಗಳನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಹಾಗಾಗಿ, ಅವರ ಜನ್ಮದಿನೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂಬುದು ನನ್ನ ಆಶಯ. ಅದಕ್ಕಾಗಿ 5 ದಿನಗಳ ಕಾಲ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ಕುರಿತು ಸಭೆ ನಡೆಸಲಿದ್ದೇನೆ ಎಂದು ವಿವರಿಸಿದರು.
BIGG NEWS : ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ : ನಾಳೆಯಿಂದ ಮತ್ತೆ 2 ದಿನ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ
ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಗಳಾಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.