ಹುಬ್ಬಳ್ಳಿ : ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.
ಸ್ಟಾರ್ಕಲ್ ಫ್ಯಾಕ್ಟರಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ನಿನ್ನೆ ಒಬ್ಬರು ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.
ಗದಗ ಮೂಲದ ವಿಜಯಲಕ್ಷ್ಮಿ (34) ನಿನ್ನೆ ಸಾವಿಗೀಡಾಗಿದ್ದರು, ಇಂದು ಚಿಕಿತ್ಸೆ ಫಲಕಾರಿಯಾಗದೇ ಮಾಳೇಶ್ (27), ಗೌರವ್ವ (45) ಮೃತಪಟ್ಟಿದ್ದಾರೆ. ಒಟ್ಟು ಎಂಟು ಕಾರ್ಮಿಕರು ಘಟನೆಯಲ್ಲಿ ಗಾಯಗೊಂಡಿದ್ದರು. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿತ್ತು. ಆ ಮೂವರು ಸಾವಿಗೀಡಾಗಿದ್ದಾರೆ. ಇನ್ನುಳಿದ ಐವರಿಗೆ ಕಿಮ್ಸನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.