ಮೈಸೂರು : ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದೆಕೊಂಡಿರುವ ಮಾಜಿ ಸಚಿವರಾದ ಜಿ.ಟಿ.ದೇವೇಗೌಡರನ್ನು ಸಾ.ರಾ. ಮಹೇಶ್ ಅವರು ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಇಂದು ಜಿ.ಟಿ.ದೇವೇಗೌಡರನ್ನು ಭೇಟಿಯಾಗಿರುವ ಸಾ.ರಾ.ಮಹೇಶ್ ಸುಮಾರು 2 ಗಂಟೆಗಳ ಮಾತುಕತೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್ ಪಕ್ಷವನ್ನು ಬಿಡದಂತೆ ಸಾ.ರಾ.ಮಹೇಶ್ ಜಿ.ಟಿ. ದೇವೇಗೌಡರಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
BIGG NEWS : ಬಿ.ಎಸ್. ಯಡಿಯೂರಪ್ಪ ಚುನಾವಣಾ ನಿವೃತ್ತಿ ಹೇಳಿಕೆ ವಾಪಸ್ ಪಡೆಯಬೇಕು : ಶಾಸಕ ಎಸ್.ಆರ್. ವಿಶ್ವನಾಥ್
ಜಿ.ಟಿ. ದೇವೇಗೌಡರು ಸದ್ಯ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಕೆಲ ದಿನಗಳಲ್ಲಿ ತಮ್ಮ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಈ ಬೆನ್ನಲ್ಲೇ ಸಾ.ರಾ.ಮಹೇಶ್ ಜಿ.ಟಿ.ದೇವೇಗೌಡರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.