ರಾಮನಗರ: ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳಿಂದ ತಲಾ ಐವರು ಕಾಡುಗೊಲ್ಲ ಸಮುದಾಯದ ಮುಖಂಡರಿಗೆ ಟಿಕೆಟ್ ಕೊಡಬೇಕು ಎಂಬುದಾಗಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಶಿವು ಯಾದವ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು ಕಾಡುಗೊಲ್ಲ ಸಮುದಾಯವನ್ನು ಕೇಂದ್ರ ಸರ್ಕಾರವು ಪರಿಶಿಷ್ಟ ವರ್ಗಕ್ಕೆ ಸೇರಿಸಿ ತ್ವರಿತವಾಗಿ ಆದೇಶ ಹೊರಡಿಸಬೇಕು ಎಂಬುದಾಗಿ ಒತ್ತಾಯಿಸಿದರು.
ಇಡಿ ಕಿರಿಕುಳ ವಿರುದ್ಧ ಮುಂದುವರೆದ ಕಾಂಗ್ರೆಸ್ ಹೋರಾಟ: ಜು.26ರಂದು ಮೌನ್ ಸತ್ಯಾಗ್ರಹ
ಕಾಡುಗೊಲ್ಲ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನಕ್ಕಾಗಿ 2011ರಲ್ಲಿ ಸರ್ಕಾರ ಅನ್ನಪೂರ್ಣಮ್ಮ ಅವರಿಗೆ ಜವಾಬ್ದಾರಿ ವಹಿಸಿತ್ತು, ಅವರು 2014ರಲ್ಲಿ ವರದಿಯನ್ನು ಸಲ್ಲಿಸಿದ್ದಾರೆ. ಈ ವದಿಯನ್ನು ಆಧರಿಸಿಯೇ ಕಾಡುಗೊಲ್ಲ ಸಮುದಾಯವು ಬುಡಕಟ್ಟು ಸಮುದಾಯಕ್ಕೆ ಸೇರಿದೆ ಎಂದು ರಾಜ್ಯ ಸರ್ಕಾರ ಗುರುತಿಸಿದೆ. ಸಿದ್ಧರಾಮಯ್ಯ ಸರ್ಕಾರವು ಎಸ್ಟಿ ಪಟ್ಟಿಗೆ ಸೇರ್ಪಡೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು, ಆದ್ರೇ ಕೇಂದ್ರ ಸರ್ಕಾರ ಈವರೆಗೆ ಯಾವುದೇ ನಿರ್ಧಆರ ಪ್ರಕಟಿಸಿಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದರು.
2018ರಲ್ಲಿ ಸರ್ಕಾರವು ನಮ್ಮ ಸಮುದಾಯವನ್ನು ರಾಜ್ಯದಲ್ಲಿನ ಜಾತಿ ಪಟ್ಟಿಗೆ ಸೇರಿಸಿದೆ. ಆದ್ರೇ ಈವರೆಗೂ ಜಿಲ್ಲಾಡಳಿತಗಳು ಕಾಡುಗೊಲ್ಲ ಜಾತಿ ಪ್ರಮಾಣಪತ್ರವನ್ನು ನೀಡುತ್ತಿಲ್ಲ. ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ನೀಡಿದ ಭರವಸೆ ಹಾಗೆಯೇ ಉಳಿದಿದೆ. ಈ ಬೇಡಿಕೆ ಈಡೇರಿಸದೇ ಇದ್ದರೇ ರಾಜಕಾರಣಗಳನ್ನು ಮುಂಬರುವ ಚುನಾವಣೆ ಸಂದರ್ಭದಲ್ಲಿ ಕಾಡುಗೊಲ್ಲರ ಹಟ್ಟಿಗಳಿಗೆ ಪ್ರವೇಶ ನೀಡಲಾಗುವುದಿಲ್ಲ ಎಂಬುದಾಗಿ ಎಚ್ಚರಿಕೆ ನೀಡಿದರು.