ಚಿತ್ರದುರ್ಗ: ಮನೆಯ ಮುಂದೆ ಆಟವಾಡುತ್ತಿದ್ದಂತ ಬಾಲಕನಿಗೆ ಬೀದಿ ನಾಯಿ ಕಡಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದನು. ಇಂದು ಆ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಬೀದಿನಾಯಿ ಕಡಿತಕ್ಕೆ ಬಾಲಕನೊಬ್ಬ ಬಲಿಯಾಗಿರೋ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಬಿಳಕಲ್ಲು ನಾಯಕನಹಟ್ಟಿಯಲ್ಲಿ ಜುಲೈ.10ರಂದು 8 ವರ್ಷದ ಬಾಲಕ ಯಶವತ್ ಆಟವಾಡುತ್ತಿದ್ದಂತ ಸಂದರ್ಭದಲ್ಲಿ ಬೀದಿನಾಯಿಗಳು ಕಚ್ಚಿ ಗಾಯಗೊಳಿಸಿದ್ದವು. ತೀವ್ರವಾಗಿ ಗಾಯಗೊಂಡಿದ್ದಂತ ಆತನನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಈ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ, ಆನಂತ್ರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಪ್ರತಿ ಪಕ್ಷದಿಂದ ಕಾಡುಗೊಲ್ಲ ಮುಖಂಡರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಬೇಕು – ಶಿವು ಯಾದವ್ ಆಗ್ರಹ
ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಯಶವಂತ್ (8), ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಆತನ ಸಾವಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡದೇ ಇರೋದು ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಮೇದೆಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಿಳಕಲ್ಲು ನಾಯಕನಹಟ್ಟಿಯಲ್ಲಿ ಬೀದಿನಾಯಿ ಹೆಚ್ಚಾಗಿ ಎಂಬುದಾಗಿ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ತಿಳಿಸಿದ್ರೂ ಯಾವುದೇ ಕ್ರಮ ಕೈಗೊಳ್ಳದೇ ಇರೋದು ಈ ದುರಂತಕ್ಕೆ ಕಾರಣ ಎಂದು ಕಿಡಿಕಾರಿದ್ದಾರೆ.