ಬೆಂಗಳೂರು: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿಗಳ ( Street Dog ) ಹಾವಳಿ ಹೆಚ್ಚಾಗುವಂತೆ ಆಗಿದೆ. ಪಾಲಿಕೆ ಮೂಲಕಗಳ ಪ್ರಕಾರ ನಿತ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 70ಕ್ಕೂ ಹೆಚ್ಚು ಮಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿವೆ ಎನ್ನಲಾಗಿದೆ. ಈ ಮೂಲಕ ಬೆಂಗಳೂರಿಗರೇ ಬೆಚ್ಚಿ ಬೀಳುವಂತೆ ಮಾಡಿದೆ.
ಪಾಲಿಕೆಯ ಮೂಲಗಳ ಪ್ರಕಾರ 2020ರ ಜನವರಿಯಿಂದ ಈವರೆಗೆ ಸುಮಾರು 52 ಸಾವಿರಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಇನ್ನೂ 2020ರ ಫೆಬ್ರವರಿಯಲ್ಲಿ ನಾಯಿಯ ಕಡಿತಕ್ಕೆ ಒಳಗಾದಂತ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು.
ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ‘ಪುಣ್ಯಕೋಟಿ ದತ್ತು ಯೋಜನೆ’ಗೆ ಜುಲೈ.28ಕ್ಕೆ ಚಾಲನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳಲ್ಲಿ 15 ಸಾವಿರಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಇದರಿಂದ ವೃದ್ಧರು, ಮಕ್ಕಳು ಮನೆಯಿಂದ ಹೊರ ಬರಲು ಆತಂಕ ಪಡುವಂತ ಪರಿಸ್ಥಿತಿ ಇದೆ. ಇದೇ ಕಾರಣದಿಂದಾಗಿ ನಾಯಿಗಳ ಶಸ್ತ್ರಚಿಕಿತ್ಸೆ ಕಾರ್ಯ ಜೋರಾಗಿ ನಡೆಯುತ್ತಿದ್ದು 8 ವಲಯಗಳಲ್ಲಿ ನಿತ್ಯ 800 ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ ಎನ್ನಲಾಗಿದೆ.