ಬೆಂಗಳೂರು: ನಗರದಲ್ಲಿ ದಿನೇ ದಿನೇ ಶಂಕಿತ ಉಗ್ರಹ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಉಗ್ರರರನ್ನು ಬಂಧಿಸಿದ್ದಂತ ಪೊಲೀಸರು, ಇದೀಗ ನಗರದಲ್ಲಿ ನೆಲೆಸಿದ್ದಂತ ಮತ್ತೊಬ್ಬ ಉಗ್ರನನ್ನು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ.
Shocking News: ಬೆಂಗಳೂರಿನಲ್ಲಿ ನಿತ್ಯ ಸರಾಸರಿ 70 ಜನರಿಗೆ ಬೀದಿ ನಾಯಿ ಕಡಿತ
ಕಳೆದ ರಾತ್ರಿ 8 ಗಂಟೆಯ ಸುಮಾರಿಗೆ ಖಚಿತ ಮಾಹಿತಿಯ ಮೇರೆಗೆ ಸಿಸಿಬಿಯ 30ಕ್ಕೂ ಹೆಚ್ಚು ಪೊಲೀಸರು ಲಷ್ಕರ್ ಶಂಕಿತ ಉಗ್ರ ಇದ್ದಂತ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಪುಡ್ ಡಿಲವರಿ ಮಾಡುವಂತ ಯುವಕರ ಜೊತೆಗೆ ನೆಲೆಸಿದ್ದಂತ ಅಸ್ಸಾಂ ಮೂಲಕ ಶಂಕಿತ ಉಗ್ರ ಅಖ್ತರ್ ಹುಸೇನ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಶಂಕಿತ ಉಗ್ರನ ವಿಚಾರಣೆ ನಡೆಯುತ್ತಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.