ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ( Uttara Kannada District ) ಸುಸಜ್ಜಿತ ಆಸ್ಪತ್ರೆಯಿಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ( Super Specialty Hospital ) ನಿರ್ಮಾಣಕ್ಕೆ ಆಗ್ರಹಿಸಿ ಜಿಲ್ಲೆಯ ಜನರು ಸೋಷಿಯಲ್ ಮೀಡಿಯಾದ ಮೂಲಕ ಅಭಿಯಾನ ಆರಂಭಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr Sudhakar ) ಏನ್ ಹೇಳಿದ್ರು ಅಂತ ಮುಂದೆ ಓದಿ..
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ ಎಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ.
1/3
— Dr Sudhakar K (@mla_sudhakar) July 25, 2022
ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಶ್ರೀ @BSBommai ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ.
2/3
— Dr Sudhakar K (@mla_sudhakar) July 25, 2022
ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
3/3
— Dr Sudhakar K (@mla_sudhakar) July 25, 2022