ಬೆಂಗಳೂರು : ಸಿಲಿಕಾನ್ ಸಿಟಿಯ ಫ್ರೀಡಂಪಾರ್ಕ್ನಲ್ಲಿ ದಿನಬೆಳಗಾದ್ರೆ ಒಂದಲ್ಲ ಒಂದು ಪ್ರತಿಭಟನೆ ನಡೆಯುತ್ತಲೇ ಇರುತ್ತದೆ. ಪ್ರತಿಭಟನಾಕಾರರ ಆಕ್ರೋಶ ಭರಿತ ಭಾಷಣಗಳು, ಮೈಕ್ಗಳ ಸೌಂಡ್ನಿಂದ ವಿದ್ಯಾಭ್ಯಾಸಕ್ಕೆ ಸಮಸ್ಯೆ ಎದುರಾಗುತ್ತಿದೆ ಎಂದು ಸ್ಥಳೀಯ ವಿದ್ಯಾರ್ಥಿಗಳು ಮಾಧ್ಯಮಗಳ ಮುಂದೆ ಸಮಸ್ಯೆ ಹೇಳಿಕೊಂಡಿದ್ದಾರೆ.
Breaking News: ರಾಯಚೂರಿನಲ್ಲಿ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ
ಫ್ರೀಡಂಪಾರ್ಕ್ ಬಳಿಯಿರುವ ಸ್ಥಳೀಯ ಮಹಾರಾಣಿ ಕಾಲೇಜು ವಿದ್ಯಾರ್ಥಿಗಳ ಸರ್ಕಾರ ಪ್ರತಿಭಟನೆಯನ್ನು ಬೇರೆಡೆಗೆ ಸ್ಥಳಾಂತರ ಮಾಡುವಂತೆ ಇದೀಗ ಮಾಧ್ಯಮಗಳ ಮೂಲಕ ಒತ್ತಾಯಿಸಿದ್ದಾರೆ.
Breaking News: ರಾಯಚೂರಿನಲ್ಲಿ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ
ಮೈಕ್ ಘೋಷಣೆಗಳಿಂದ ವಿದ್ಯಾರ್ಥಿಗಳಿಗೆ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು. ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಸೌಂಡ್ ಎಫೆಕ್ಟ್ನಿಂದ ಸಮಸ್ಯೆ ಎದುರಾಗುತ್ತಿದೆ. ಇದ್ರಿಂದ ಪರೀಕ್ಷೆ ಬರೆಯೋದಕ್ಕು ಕಷ್ಟವಾಗುತ್ತಿದೆ. ಹಾಗಾಗಿ ಇದೀಗ ಈ ಸಮಸ್ಯೆಗಳನ್ನು ಒತ್ತಾಯಿಸಿ ಕೋರ್ಟ್ ಮೆಟ್ಟಿಲೇರಲು ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ.