ಬಳ್ಳಾರಿ: ಚರಂಡಿ ನೀರು ಕುಡಿಯುವ ನೀರಿನ ಜೊತೆ ಸೇರಿದಂತ ನೀರನ್ನೇ ಕುಡಿದ ಪರಿಣಾಮ, ಓರ್ವ ಬಾಲಕಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ ವಾಂತಿ-ಬೇಧಿ ಕಾಣಿಸಿಕೊಂಡು ಚಿಕಿತ್ಸೆ ಫಲಿಸದೇ ಸುಕನ್ಯಾ(10) ಬಾಲಕಿ ಸಾವನ್ನಪ್ಪಿದ್ದಾರೆ. ಅಲ್ಲದೇ 20ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪೆಡಯುತ್ತಿದ್ದಾರೆ.
BREAKING NEWS: ಬೆಂಗಳೂರಿನಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ‘ಪೊಲೀಸರ ಹೊಯ್ಸಳ ವಾಹನ’
ಅಸ್ವಸ್ಥಗೊಂಡ ಕೆಲವರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, ಮತ್ತೆ ಕೆಲವರಿಗೆ ಗೋನಾಳ ಗ್ರಾಮದಲ್ಲಿನ ಶಾಲಾ ಆವರಣದಲ್ಲಿಯೇ ಪ್ರಥಮ ಚಿಕಿತ್ಸೆಯನ್ನು ಕೊಡಲಾಗುತ್ತಿದೆ.
ಅಂದಹಾಗೇ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣಗೊಂಡ ಕಾರಣ, ಗೋನಾಳ ಗ್ರಾಮದ ಜನರಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಬಳ್ಳಾಜಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜನಾರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.