ತೆಲಂಗಾಣ: ತೆಲಂಗಾಣದಲ್ಲಿ ಮಂಗನ ಕಾಯಿಲೆಯ ಮೊದಲ ಶಂಕಿತ ಪ್ರಕರಣವನ್ನು ಕಾಮರೆಡ್ಡಿ ಜಿಲ್ಲೆಯಲ್ಲಿ ಪತ್ತೆಯಾಗಿದೆ.
ಕಾಮರೆಡ್ಡಿ ಜಿಲ್ಲೆಯ ಇಂದಿರಾನಗರ ಕಾಲೋನಿಯ 40 ವರ್ಷದ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿವೆ. ಇವರು ಜುಲೈ 6 ರಂದು ಕುವೈತ್ನಿಂದ ಹಿಂತಿರುಗಿದ್ದರು. ಇವರನ್ನು ನಲ್ಲಕುಂಟಾದ ಫೀವರ್ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆಯ ಪ್ರತ್ಯೇಕ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜುಲೈ 20 ರಂದು ಅವರಿಗೆ ಜ್ವರ ಕಾಣಿಸಿಕೊಂಡಿತು. ಜುಲೈ 23 ರಂದು ಅವರಿಗೆ ದದ್ದುಗಳು ಕಾಣಿಸಿಕೊಂಡವು. ಅವರ ಸಂಪರ್ಕದಲ್ಲಿದ್ದ ಆರು ಮಂದಿಯಲ್ಲಿ ಯಾವುದೇ ರೋಗಲಕ್ಷಣಗಳು ಕಂಡು ಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾರ್ವಜನಿಕ ಆರೋಗ್ಯ ಇಲಾಖೆಯ ನಿರ್ದೇಶಕ ಜಿ ಶ್ರೀನಿವಾಸ್ ರಾವ್ ಪ್ರಕಟಣೆಯಲ್ಲಿ, ‘ಖಾಸಗಿ ಆಸ್ಪತ್ರೆ ವೈದ್ಯರು ಮಂಗನ ಕಾಯಿಲೆಯ ಲಕ್ಷಣಗಳನ್ನು ಗುರುತಿಸಿ ಒಬ್ಬ ವ್ಯಕ್ತಿಯನ್ನು ಕಾಮರೆಡ್ಡಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ವ್ಯಕ್ತಿಯ ಮಾದರಿ ಸಂಗ್ರಹಿಸಿ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್ಗೆ ಕಳುಹಿಸಲಾಗಿದೆ. ಫಲಿತಾಂಶ ಬರುವವರೆಗೆ, ಅವರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುವುದು. ಈ ವ್ಯಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿದ್ದ ಆರು ಜನರನ್ನು ನಾವು ಗುರುತಿಸಿದ್ದೇವೆ. ಅವರನ್ನೂ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದಿದ್ದಾರೆ.
ಸಿಕಂದರಾಬಾದ್ನ ಗಾಂಧಿ ಆಸ್ಪತ್ರೆಯನ್ನು ಪರೀಕ್ಷಾ ಕೇಂದ್ರವಾಗಿ ಮತ್ತು ನೋಡಲ್ ಆಸ್ಪತ್ರೆಗಳನ್ನು ಚಿಕಿತ್ಸಾ ಕೇಂದ್ರಗಳಾಗಿ ಬಳಸಲಾಗುತ್ತಿದೆ ಎಂದು ತೆಲಂಗಾಣ ಆರೋಗ್ಯ ಸಚಿವ ಟಿ ಹರೀಶ್ ರಾವ್ ಹೇಳಿದ್ದಾರೆ. ಪ್ರಾಥಮಿಕವಾಗಿ ಆಫ್ರಿಕಾದ ಪ್ರಯಾಣಿಕರನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಗಾಯಗಳು, ದದ್ದುಗಳು, ಜ್ವರದಂತಹ ರೋಗಲಕ್ಷಣಗಳನ್ನು ಯಾರಾದರೂ ತೋರಿಸಿದರೆ ಆಸ್ಪತ್ರೆಯನ್ನು ಸಂಪರ್ಕಿಸಬೇಕು. ಅವರಿಗೆ ಸರ್ಕಾರವು ಅಗತ್ಯ ಚಿಕಿತ್ಸೆಯನ್ನು ಒದಗಿಸುತ್ತದೆ ಎಂದು ಅವರು ಹೇಳಿದರು.
Big news: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ʻಜನರಲ್ ನರವಾಣೆʼಯನ್ನು ಗೌರವಿಸಿದ USISPF