ಧಾರವಾಡ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಯುವಕರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
BIGG NEWS : ರಾಜ್ಯದ ಉಪ ನೋಂದಣಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳಿಗೆ `ಐಡಿ ಕಾರ್ಡ್’ ಕಡ್ಡಾಯ
ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಇಲಾಖಾ ವೆಬ್ಸೈಟ್ https://bcwd.karnataka.gov.in ನಲ್ಲಿ ಪಡೆದು ಜುಲೈ 30 ರಂದು ರೊಳಗಾಗಿ ಕಚೇರಿಗೆ ಸಲ್ಲಿಸಬಹುದು.
Big news: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ʻಸೋನಿಯಾ ಗಾಂಧಿʼಗೆ 2ನೇ ಸುತ್ತಿನ ವಿಚಾರಣೆ
ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲೆ 0824-2225078, ಉಡುಪಿ ಜಿಲ್ಲೆ 0820-2574881, ಉತ್ತರ ಕನ್ನಡ 08382-226589, ಕೇಂದ್ರ ಕಚೇರಿ 8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIGG NEWS : `ಕಸ್ತೂರಿ ರಂಗನ್ ವರದಿ’ ಬಗ್ಗೆ ಆತುರದ ನಿರ್ಧಾರ ಕೈಗೊಳ್ಳಲ್ಲ : ಸಿಎಂ ಬಸವರಾಜ ಬೊಮ್ಮಾಯಿ