ಮಂಡ್ಯ : ಕೆಆರ್ ಎಸ್ ಡ್ಯಾಂನ ಬೇಬಿ ಬೆಟ್ಟದಲ್ಲಿ ನಡೆಯುವ ಕಲ್ಲು ಗಣಿಗಾರಿಕೆಯಿಂದಾಗಿ ಅಪಾಯ ಇದೆಯೋ ಇಲ್ಲವೋ ತಿಳಿದುಕೊಳ್ಳಲು ಟ್ರಯಲ್ ಬ್ಲಾಸ್ಟ್ ಒಂದೇ ದಿನಕ್ಕೆ ಅಂತ್ಯಕಂಡಿದೆ. ತೀವ್ರ ವಿರೋಧದ ನಡುವೆಯೂ ಪರೀಕ್ಷಾರ್ಥ ಸ್ಪೋಟ ನಡೆಸಲು ಮುಂದಾಗಿದ್ದ ಜಿಲ್ಲಾಡಳಿತ ಕಡೆಗೂ ರೈತರ ಒತ್ತಡಕ್ಕೆ ಮಣಿದು ತಾತ್ಕಾಲಿಕವಾಗಿ ಟ್ರಯಲ್ ಬ್ಲಾಸ್ಟ್ ಪ್ರಕ್ರಿಯೆ ಮುಂದೂಡಿದೆ.
BIGG NEWS : ಸೇನೆ ಸೇರಬಯಸುವ ಹಿಂದುಳಿದ ವರ್ಗಗಳ ಯುವಕರಿಗೆ ಇಲ್ಲಿದೆ ಗುಡ್ ನ್ಯೂಸ್
ಏಳು ದಿನಗಳ ಕಾಲ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಬೇಬಿ ಬೆಟ್ಟದ ಬಳಿ ಕರ್ನಾಟಕ ರಾಜ್ಯ ರೈತ ಸಂಘದವರು ಪ್ರತಿಭಟನೆ ನಡೆಸಿದ್ದರು. ಬಳಿಕ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತ ಮುಖಂಡರು.ಇದೀಗ ತಾತ್ಕಾಲಿಕವಾಗಿ ಟ್ರಯಲ್ ಮುಂದೂಡಿರುವುದಾಗಿ ಮಂಡ್ಯ ಡಿಸಿ ಅಶ್ವಥಿ ರೈತರಿಗೆ ದೂರವಾಣಿ ಮುಖಾಂತರ ಹೇಳಿಕೆ ನೀಡಿದ್ದಾರೆ.
BIGG NEWS : ರಾಜ್ಯದ ಉಪ ನೋಂದಣಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳಿಗೆ `ಐಡಿ ಕಾರ್ಡ್’ ಕಡ್ಡಾಯ
ನಿಮ್ಮ ಪರವಾಗಿ ಅಧಿಕಾರಿಯೊಬ್ಬರನ್ನು ಕಳುಹಿಸಿ ಹೇಳುವಂತೆ ರೈತರು ಹೇಳಿದ್ದಾರೆ. ಡಿಸಿ ಅಧಿಕಾರಿಯನ್ನು ಕಳುಹಿಸುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಪ್ರತಿಭಟನೆಯನ್ನು ಕೈ ಬಿಡಲು ರೈತರು ಮುಂದಾಗಿದ್ದಾರೆ.
BIGG NEWS : ಕಲ್ಯಾಣ ಕರ್ನಾಟಕ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ ವಿತರಣೆ