ಮಂಡ್ಯ : ಮುಂದಿನ ವಿಧಾನ ಸಭೆ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರವಾಗಿ ಮಂಡ್ಯದ ಜಿಲ್ಲೆಯ ಮದ್ದೂರಿನಲ್ಲಿ ಮಾಜಿ ಎಂ ಹೆಚ್.ಡಿ ಕುಮಾರ ಸ್ವಾಮಿ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.
ನಿಖಿಲ್ ಸ್ಪರ್ಧೆ ಮಾಡುತ್ತಾರೆ ಎಂದು ಯಾರು ಹೇಳಿದ್ದು? ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರಶ್ನೆ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲಲ್ಲ. 20ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆ. ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲಲ್ಲ ವಿಧಾನ ಸಭೆ ಚುನಾವಣೆಗೂ ನಿಖಿಲ್ ಸ್ಪರ್ಧಿಸಲ್ಲ ಎಂದ ಕಿಡಿಕಾರಿದ್ದಾರೆ.