ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ಗೆ ಸಂಬಂಧಪಟ್ಟಂತೆ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಡಿ ವಿಚಾರಣೆ ಮಾಡುತ್ತಿರುವುದನ್ನು ವಿರೋಧಿಸಿ ಇಂದೂ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಇಡಿ ವಿಚಾರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೇಂದ್ರ ಸರ್ಕಾರ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಕೇಂದ್ರ ಏಜೆನ್ಸಿಗಳನ್ನು ದುರುಪಯೋಗಿಪಡಿಸಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಇಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Rahul Gandhi sits on road in protest as Sonia Gandhi questioned by ED
Read @ANI Story | https://t.co/BioctBHOzH#SoniaGandhi #RahulGandhi #Congress #protest #EnforcementDirectorate pic.twitter.com/OTh4hnqBH9
— ANI Digital (@ani_digital) July 26, 2022