ಕೆಎನ್ಎನ್ ಡಿಜಿಟಲ್ ಡೆಸ್ಕ್: ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠವು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿತ್ತು. ಜುಲೈ 15ರಂದು ವಿಚಾರಣೆ ಪೂರ್ಣಗೊಳಿಸಿದ ಪೀಠ ತನ್ನ ಆದೇಶವನ್ನು ಕಾಯ್ದಿರಿಸಿತ್ತು.
BIGG NEWS: ಸೋನಿಯಾ ಗಾಂಧಿ ಇಡಿ ಅಧಿಕಾರಿಗಳ ವಿಚಾರಣೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಅಕ್ಟೋಬರ್ 3 ರಂದು ಯುಪಿಯ ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಅವರನ್ನು ಅಕ್ಟೋಬರ್ 9 ರಂದು ಬಂಧಿಸಲಾಯಿತು.
ಅಕ್ಟೋಬರ್ 3ರಂದು ಲಖಿಂಪುರ ಖೇರಿಗೆ ಬಿಜೆಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿಕೊಟ್ಟಿದ್ದರು. ಈ ವೇಳೆ ಮೌನವಾಗಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿದಿತ್ತು. ಈ ಘಟನೆ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿತ್ತು. ಇದರಲ್ಲಿ ಪತ್ರಕರ್ತನೊಬ್ಬ, ನಾಲ್ವರು ರೈತರು, ಮೂವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದರು.
ಆದರೆ ಆಶೀಶ್ ಮಿಶ್ರಾ ತಮ್ಮ ವಿರುದ್ಧದ ಆರೋಪ ಅಲ್ಲಗಳೆದಿದ್ದರು. ನಾನು ಘಟನೆ ನಡೆದಾಗ ಬನ್ವೀರ್ಪುರದಲ್ಲಿ ಇದ್ದೆ. ಉಪಮುಖ್ಯಮಂತ್ರಿಯನ್ನು ಕರೆದುಕೊಂಡು ಬರಲು ನಮ್ಮ ಮೂರು ವಾಹನಗಳು ಹೋಗಿದ್ದವು. ಆದರೆ ಅವುಗಳ ಮೇಲೆ ರೈತರು ಕಲ್ಲು ಎಸೆದು, ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲ, ಕಾರಿಗೆ ಬೆಂಕಿಯನ್ನೂ ಹಚ್ಚಿದ್ದಾರೆ. ಮೂರ್ನಾಲ್ಕು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದೂ ಅವರು ಆರೋಪಿಸಿದ್ದರು.
BREAKING NEWS : ʻ ಕಬಡ್ಡಿ ಆಟ ʼ ಆಡುವ ಮುನ್ನಎಚ್ಚರ..! ಕಬಡ್ಡಿಪಂದ್ಯದ ವೇಳೆಯೇ, ಹೃದಯಘಾತದಿಂದ ʻ ಆಟಗಾರ ಸಾವು ʼ