ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
10ನೇ ತರಗತಿ ಉತ್ತೀರ್ಣರಾಗಿರುವ 18-22 ವಯೋಮಿತಿಯೊಳಗಿನ ಅಭ್ಯರ್ಥಿ ಮತ್ತು ಕುಟುಂಬದ ವಾರ್ಷಿಕ ಆದಾಯ ಪ್ರ-1ಕ್ಕೆ ರೂ. 2.50 ಲಕ್ಷ ಹಾಗೂ ಪ್ರ-2(ಎ), 3(ಎ), ಹಾಗೂ 3(ಬಿ) ಗಳಿಗೆ ರೂ. 1.00 ಲಕ್ಷಗಳ ಮಿತಿಯಲ್ಲಿರಬೇಕು.
BREAKING: ವೇಶ್ಯಾವಾಟಿಕೆ ನಡೆಸುತ್ತಿದ್ದ ಮೇಘಾಲಯ ಬಿಜೆಪಿ ನಾಯಕನ ಬಂಧನ | Meghalaya BJP Leader
ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನೀಡಲಾಗುವುದು. ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು. ನಿಗದಿತ ನಮೂನೆ ಅರ್ಜಿಯನ್ನು ಇಲಾಖಾ ವೆಬ್ಸೈಟ್ www.bcwd.karnataka.gov.in ರಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ: 30/07/2022 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
BREAKING NEWS: 1ನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿ 6 ವರ್ಷಕ್ಕೆ ಹೆಚ್ಚಿಸಿ ‘ರಾಜ್ಯ ಸರ್ಕಾರ’ ಆದೇಶ
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ದ.ಕ.ಜಿಲ್ಲೆ ದೂ.ಸಂ.: 0824-2225078, ಉಡುಪಿ ಜಿಲ್ಲೆ –ದೂ.ಸಂ.: 0820-2574881, ಉತ್ತರಕನ್ನಡ ಜಿಲ್ಲೆ ದೂ.ಸಂ.: 08382-226589 ಹಾಗೂ ಕೇಂದ್ರ ಕಚೇರಿ ಬೆಂಗಳೂರು 8050770004 ಗಳನ್ನು ಸಂಪರ್ಕಿಸುವುದು.