ಹಾವೇರಿ: ಜಿಲ್ಲೆಯ ವಿಶ್ವವಿದ್ಯಾನಿಲಯಗಳಲ್ಲಿ ಪಿಎಚ್ಡಿ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್.ಮಾದರಿಯಲ್ಲಿ ಫೇಲೋಶಿಪ್ ಸೌಲಭ್ಯಕ್ಕೆ ಸೇವಾಸಿಂಧು ಪೋರ್ಟ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಸ್ಚಿಯನ್, ಜೈನ್, ಪಾರ್ಸಿ, ಬೌದ್ಧರು ಮತ್ತು ಸಿಖ್ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ 35 ವರ್ಷದೊಳಗಿಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದ್ಯೋಗಿಯಾಗಿರಬಾರದು. ವಾರ್ಷಿಕ ಆದಾಯ ರೂ.ಎಂಟು ಲಕ್ಷದೊಳಗಿರಬೇಕು.
‘ಭಾರತೀಯ ಸೇನೆ’ಗೆ ಸೇರಬಯಸುವವರಿಗೆ ಗುಡ್ ನ್ಯೂಸ್: ಪೂರ್ವ ಸಿದ್ಧತೆ, ಮಾರ್ಗದರ್ಶನ ತರಬೇತಿಗೆ ಅರ್ಜಿ ಆಹ್ವಾನ
ಅರ್ಹ ವಿದ್ಯಾರ್ಥಿಗಳು https://sevasindhu.karnataka.gov.in/sevasindhu/ departmentservicesKannadas.gov.in ನಲ್ಲಿ ದಿನಾಂಕ 16-8-2022ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ವೆಬ್ಸೈಟ್ www.dom.karnataka.gov.in ಅಥವಾ https://sevasindhu.karnataka.gov.in ಗೆ ಭೇಟಿ ನೀಡಬೇಕು. ಸ್ವೀಕೃತವಾದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಲ್ಲಿಸಬೇಕು.
BREAKING: ವೇಶ್ಯಾವಾಟಿಕೆ ನಡೆಸುತ್ತಿದ್ದ ಮೇಘಾಲಯ ಬಿಜೆಪಿ ನಾಯಕನ ಬಂಧನ | Meghalaya BJP Leader
ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಹಿರೇಕೆರೂರು, ಹಾನಗಲ್, ಸವನೂರು, ಶಿಗ್ಗಾಂವ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.