ಬೆಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ 2022-23ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ-ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
BIGG NEWS : `CET’ ಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-1(ಇ.ವಿ ಮತ್ತುಇತರೆ ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ ಗರಿಷ್ಠ ರೂ.0.50 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-2(ಸಹಾಯಧನ ಗರಿಷ್ಠ ರೂ. 2.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3(ಸರಕು ವಾಹನಗಳಿಗೆ ಸಹಾಯಧನ ಗರಿಷ್ಠ ರೂ. 3.50 ಲಕ್ಷ), ಮೈಕ್ರೋ ಕ್ರೆಡಿಟ್(ಪ್ರೇರಣಾ) (ಮಹಿಳಾ ಸ್ವ ಸಹಾಯ ಗುಂಪುಗಳಿಗೆ), ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯುವ ಸಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಲೆ ಏರಿಕೆ ಎಫೆಕ್ಟ್ : ಕಲ್ಯಾಣ ಕರ್ನಾಟಕ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ ವಿತರಣೆ
ಅರ್ಹ ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 2022ರ ಆಗಸ್ಟ್ 20 ಕೊನೆಯ ದಿನವಾಗಿದೆ. ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು, ಆನ್ಲೈನ್ನಲ್ಲಿ ಸಲ್ಲಿಸಬೇಕಾದ ದಾಖಲಾತಿಗಳ ವಿವರ ಹಾಗೂ ಅರ್ಜಿ ಸಲ್ಲಿಕೆಗಾಗಿ ವೆಬ್ಸೈಟ್ https://suvidha.karnataka.gov.in ಅನ್ನು ನೋಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ದೂರವಾಣಿ ಸಂಖ್ಯೆ: 080-29781036 ಹಾಗೂ ನಿಗಮದ ವೆಬ್ಸೈಟ್ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನಿಯಮಿತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.