ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಪಮಂಗಳೂರಿನಲ್ಲಿ ಉದ್ರಿಕ್ತರು ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಬೆಳ್ಳಾರೆ, ಪುತ್ತೂರು, ಸುಳ್ಯ, ಕಡಬದಲ್ಲಿ ಸ್ವಯಂಘೋಷಿತ ಬಂದ್ ಗೆ ಹಿಂದು ಸಂಘಟನೆಗಳು ಕರೆ ನೀಡಿದ್ದು, ಮಂಗಳೂರಿನಲ್ಲಿ ಸರ್ಕಾರಿ ಬಸ್ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳೂರಿನ ಪುತ್ತೂರಿನ ಬೊಲ್ವರಿ ಬಳಿ ಉದ್ರಿಕ್ತರಿಂದ ಕಲ್ಲು ತೂರಾಟ ನಡದಿದೆ.
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.