ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಬೆಟ್ಟಾರು ಹತ್ಯೆ ಪ್ರಕರಣ; ಹಂತಕನ ಪತ್ತೆಗೆ 5 ವಿಶೇಷ ತಂಡ ರಚನೆ
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಜನರು ಶಾಂತಿ ಕಾಪಾಡಬೇಕು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂದ ಈಗಾಗಲೇ ನಾನು ಗೃಹ ಸಚಿವ ಅರಗ ಜ್ಞಾನೇಂದ್ರ ಜೊತೆಗೆ ಮಾತನಾಡಿದ್ದೇನೆ. ಸಂಪೂರ್ಣ ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂಥ ಕೃತ್ಯ ಎಸಗುವವರನ್ನು ಮಟ್ಟಹಾಕುವ ಕೆಲಸ ಮಾಡುತ್ತೇವೆ, ರಾಜ್ಯದ ಜನರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
Breaking news: ತಮಿಳುನಾಡಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ: ಕಳೆದೆರಡು ವಾರಗಳಲ್ಲಿ ಇದು 4ನೇ ಪ್ರಕರಣ
ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್ಗೆ ವಿಎಚ್ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಅಂಗಡಿ ಮುಂಗಟ್ಟು ತೆರೆಯದಂತೆ ಸಂಘಟನೆಗಳು ವಿನಂತಿ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು, ಸುಳ್ಯ ತಾಲೂಕಿನ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.