ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ ಪುತ್ತೂರಿನಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಈಗಾಗಲೇ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಹಾಸನದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಬೀದಿ ನಾಯಿಗಳ ಹಾವಳಿ; ಆಟವಾಡುತ್ತಿದ್ದ ಬಾಲಕನಿಗೆ ಕಚ್ಚಿದ ನಾಯಿ
ಈ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಮಂಗಳೂರು ಮತ್ತು ಉಡುಪಿಯಿಂದ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಸಹ ಕಳುಹಿಸಲಾಗಿದೆ.
ಇನ್ನು ಪುತ್ತೂರು ಸುಳ್ಯ ಹಾಗೂ ಕಡಬ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇನ್ನು ಆರೋಪಿಗಳನ್ನ ಬಂಧಿಸಿ, ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಹಿಂದೂ ಮುಖಂಡರು ಒತ್ತಾಯಿಸಿದ್ದಾರೆ.