ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ 8 ಮಂದಿ ಶಂಕಿತರ ಬಂಧಿಸಲಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದೀಗ ನಿನ್ನೆ ಬರ್ಬರವಾಗಿ ಹತ್ಯೆಗೊಂಡ ಪ್ರವೀಣ್ ಫಾರ್ಥಿವ ಶರೀರವನ್ನು ಪುತ್ತೂರಿನಿಂದ ಬೆಳ್ಳಾರೆ ಪೇಟೆಗೆ ಮೆರವಣೆಗೆ ಮಾಡುವ ಮೂಲಕ ರವಾನೆ ಮಾಡಲಾಗುತ್ತಿದೆ. ಕುಟುಂಬಸ್ಥರ ಅಕ್ರಂಧನ ಮುಗಿಲು ಮುಟ್ಟಿದೆ
ಬಿಜೆಪಿ ಮುಖಂಡ ಪ್ರವೀಣ್ ಕೋಳಿ ಫಾರಂನಲ್ಲಿ ಇರುವ ಸಂದರ್ಭದಲ್ಲಿ ಆತನ ಚಲನವಲನಗಳನ್ನು ಗಮನಿಸಿಕೊಂಡು ಹತ್ಯೆ ನಡೆಸಿದ್ದಾರೆ. ಸ್ಥಳೀಯರ ಮಾಹಿತಿ ಮೆರೆಗೆ ನಿನ್ನೆ ಹತ್ಯೆ ನಡೆಸಲಾಗಿದೆ. ಕೇರಳ ರಿಜಿಸ್ಟೇಷನ್ ಗಾಡಿ ಬಂದಿತ್ತು. ಈ ಹಿನ್ನೆಲೆ ಪೊಲೀಸರು ತನಿಖೆ ನಡೆಸಿದ್ದರು ಆಗ ಈ ಮಾಹಿತಿ ತಿಳಿದು ಬಂದಿದೆ.
ಕೆಲ ದಿನಗಳ ಹಿಂದಷ್ಟೇ ಬೆಳ್ಳಾರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾಸರಗೋಡು ನಿವಾಸಿ ಮಸೂದ್ ಎಂಬಾತನ ಕೊಲೆಯಾಗಿತ್ತು. ಮಸೂದ್ ಮೇಲೆ ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎನ್ನುವವರು ಹಲ್ಲೆ ಮಾಡಿದ್ದರು. ಜುಲೈ 19ರಂದು ಸುಧೀರ್ ಎಂಬಾತನಿಗೆ ಮಸೂದ್ ಕೈ ತಾಗಿದ ಕಾರಣ ಉಂಟಾದ ಗಲಾಟೆ ಮಸೂದ್ ಸಾವಿನಲ್ಲಿ ಪರ್ಯಾಸನಗೊಂಡಿತ್ತು. ಬಾಟಲಿಯಿಂದ ತಲೆಗೆ ಏಟು ಬಿದ್ದಿದ್ದ ಮಸೂದ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದ. ಈ ಸಾವಿಗೆ ಪ್ರತೀಕಾರವಾಗಿ ಬಿಜೆಪಿ ಮುಖಂಡನ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.