ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಬರ್ಬರ ಹತ್ಯೆ ಖಂಡಿಸಿ, ಬಿಜೆಪಿ ಯುವ ಮೋರ್ಚಾದ ಸದಸ್ಯರು, ಪಕ್ಷದ ವಿರುದ್ದವೇ ಅಕ್ರೋಶ ಹೊರಹಾಕಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ಅವರ ಹತ್ಯೆಯನ್ನು ಖಂಡಿಸಿ, ಹಾಗೂ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧಆಕ್ರೋಶ ಹೊರಹಾಕಿ, ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳವಾರ ರಾತ್ರಿ ಪ್ರವೀಣ್ ಕೋಳಿ ಅಂಗಡಿ ಬಳಿ ಮೂವರು ಅಪರಿಚಿತರು ಬೈಕ್ ನಲ್ಲಿ ಬಂದು ಪ್ರವೀಣ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಗಂಭೀರ ಗಾಯೊಗೊಂಡಿದ್ದ ಪ್ರವೀಣ್ ಅವರನ್ನು ಆಸ್ಪತ್ರೆಗೆ ರವಾನಿಸದರೂ ಅವರು ಮೃತಪಟ್ಟಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಏಳು ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಕ್ಷಯ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್ ಅವರು ನೀಡಿದ ದೂರಿನಂತೆ ಕೃತ್ಯವೆಸಗಿದ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಲಾಗಿದೆ. ಮೂವರು ಕೇರಳ ಮೂಲದವರು ಎಂದು ಶಂಕಿಸಲಾಗಿದೆ.