ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ದರ್ಶನದ ಸ್ಥಳಕ್ಕೆ ಸಚಿವ ನಳೀನ್ ಕುಮಾರ್ ಕಟೀಲ್, ಸಚಿವ ಸುರೇಶ್ ಸೇರಿದಂತೆ ಆಗಮಿಸುತ್ತಿದ್ದಂತೆ ಬೆಳ್ಳಾರೆಯಲ್ಲಿ ಭುಗಿಲೆದ್ದ ಆಕ್ರೋಶದ ಕಿಚ್ಚು ಹೆಚ್ಚಾಗಿದೆ.
ಜಮಾಯಿಸಿದ ಕಾರ್ಯಕರ್ತರನ್ನು ಚದುರಿಸಲು ಪೊಲೀಸರ ಲಾಠಿ ಬೀಸಿದ್ದಾರೆ. ಈ ಸ ಸಂದರ್ಭದಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಮಸೀದಿ ಬಳಿಯಿಂದ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಆ ವೇಳೆ ಬಿಜೆಪಿ ಕಾರ್ಯಕರ್ತನ ತಲೆಗೆ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.