ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾರಿಚಾರ್ಚ್ ಮಾಡಿದ್ದಾರಾದ್ರೂ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ. ಸಧ್ಯ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ ಆದೇಶ ನೀಡಲಾಗಿದೆ.
ಇನ್ನು ಪರಿಸ್ಥಿತಿ ಮತ್ತಷ್ಟು ಬಿಗಾಡಿಸುವ ಲಕ್ಷಣಗಳು ಕಾಣಿಸುತ್ತಿದ್ದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಟಿ ರವಿ ಸೇರಿ ಹಲವರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಂದ್ಹಾಗೆ, ಬೆಳ್ಳಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸಚಿವ ನಳೀನ್ ಕುಮಾರ್ ಕಟೀಲ್ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ ಜಗ್ಗಾಡಿದ್ದಾರೆ. ಪೊಲೀಸ್ ಬಂದೋಬಸ್ತಿನಲ್ಲಿ ಕಟೀಲು ಪಾರಾಗಿದ್ದಾರೆ. ಇನ್ನೂ ಘಟನಾ ಸ್ಥಳದಲ್ಲಿ ಪೊಲೀಸರು ಲಾಠ ಚಾರ್ಜ್ ಮಾಡಿದ್ದಾರೆ ಇದಕ್ಕೂ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.