ಹಿಮಾಚಲ ಪ್ರದೇಶ: ಶಿಮ್ಲಾದಲ್ಲಿ ಬುಧವಾರ ಬಸ್ ಕಮರಿಗೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ 25 ಜನರಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದೆ, ಚಿಕಿತ್ಸೆಗಾಗಿ ಸ್ಥಳೀಯ ಇಂದಿರಾಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ನಂತರ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಗಳನ್ನು ಕೈಗೊಂಡಿದ್ದಾರೆ.