ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಶುರುವಾಗಿದ್ದು, ರಾಜ್ಯದ ಹಲವಡೆ ರಾತ್ರಿಯೀಡಿ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಜನಜೀವನ ಅಸ್ವಸ್ಥಗೊಂಡಿದೆ.
SHOCKING NEWS: ತರಗತಿಯಲ್ಲೇ ವಿದ್ಯಾರ್ಥಿ ಟೀಚರ್ ಗೆ ಮಸಾಜ್ ಮಾಡಿದ VIDEO ವೈರಲ್: ಯುಪಿ ಶಿಕ್ಷಕಿ ಅಮಾನತು
ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಗದಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಗದಗ ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರಿ ಮಳೆಸುರಿದಿದ್ದು, ರಾಜಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗಿದೆ. ಬೆಟಗೇರಿಯ ವಾರ್ಡ್ ನಂಬರ್ 4ರ ಮಂಜುನಾಥ್ ನಗರ, ವಾಲ್ಮೀಕಿ ಅಂಬೇಡ್ಕರ್ ಬಡಾವಣೆಯಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ.
ಶಿವಮೊಗ್ಗ ನಗರದಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಬಾಪೂಜಿ ನಗರದ ಅನೇಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ. ಹಾಸನ ಜಿಲ್ಲೆಯಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ಅರಸೀಕೆರೆ ಪಟ್ಟಣದಲ್ಲಿ ಭಾರಿ ಮಳೆಗೆ ಜನಜೀವನ ಅಸ್ವಸ್ಥಗೊಂಡಿದೆ. ಆಹಾರ ಸಾಮಾಗ್ರಿ, ದವಸ ಧಾನ್ಯಗಳು ನೀರುಪಾಲಾಗಿದ್ದು, ನೀರು ಹೊರಹಾಕಲು ನಿವಾಸಿಗಳು ಪರದಾಡುತ್ತಿದ್ದಾರೆ
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲೂ ರಾತ್ರಿಯಿಡಿ ಭಾರೀ ಮಳೆಯಾಗಿದೆ. ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ವಸ್ಥಗೊಂಡಿದೆ.