ಬೆಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (NIA) ತನಿಖೆಗೆ ನೀಡಬೇಕು ಎಂದು ಪ್ರವೀಣ್ ಪತ್ನಿ ನೂತನಾ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಬೇಕು. ಆಗ ಮಾತ್ರ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ. ನನ್ನ ಪತಿ ತುಂಬಾ ಒಳ್ಳೆಯವರು. ಸಣ್ಣಪುಟ್ಟ ಕೋಪ ತಾಪಗಳಿತ್ತು. ಆದರೆ ಅವರಿಗೆ ಯಾರ ಮೇಲೂ ದ್ವೇಷವಿರಲಿಲ್ಲ. ಆದರೂ ಅವರನ್ನು ಹತ್ಯೆ ಮಾಡಲಾಗಿದೆ. ಅವರಿಗೆ ಆದ ರೀತಿ ಮತ್ಯಾರಿಗೂ ಆಗಬಾರದು. ಅದಕ್ಕೆ ಬೇಕಾದ ಶಿಕ್ಷೆಯನ್ನು ಕಾನೂನಿನ ಮೂಲಕ ಆಗಬೇಕು ಎಂದು ಹೇಳಿದ್ದಾರೆ.
Gold Rate Today : ಗ್ರಾಹಕರಿಗೆ ʼಗುಡ್ ನ್ಯೂಸ್ʼ : ʻ ಭೀಮನ ಅಮವಾಸ್ಯೆʼ ದಿನ ಚಿನ್ನದ ಬೆಲೆ ದಿಢೀರ್ ಇಳಿಕೆ